ಆ.26; ದುಗ್ಗಲಡ್ಕದ ಕೊಯಿಕುಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

0


ದುಗ್ಗಲಡ್ಕದ ಶ್ರೀ ಕೃಷ್ಣ ಭಜನಾ ಮಂದಿರ ಕೊಯಿಕುಳಿ, ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.


ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಣಹೋಮ, ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ನಡೆಯಲಿದೆ.ಪುಟಾಣಿಗಳಿಗೆ, ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರುರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.