ಆ. 16: ಬಾಳಿಲದ ಕೊಡೆಂಕಿರಿಯಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ

0

ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ಕೊಡೆಂಕಿರಿ, ಮರೆಂಗಾಲ ಇದರ ಆಶ್ರಯದಲ್ಲಿ 16ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಆ. 26ರಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಸಂಜೆ 6.00 ಗಂಟೆಗೆ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಮರೆಂಗಾಲರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ರಾತ್ರಿ 7.30ರಿಂದ ಡಾನ್ಸ್ & ಬೀಟ್ಸ್ ಮತ್ತು ಇತರ ಶಾಖೆಗಳ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ಮರೆಂಗಾಲ, ಕಾರ್ಯದರ್ಶಿಯಾಗಿ ನಾಗರಾಜ ಮತ್ತು ಕೋಶಾಧಿಕಾರಿಯಾಗಿ ನವೀನ್ ಎಂ. ಕಾರ್ಯನಿರ್ವಹಿಸುತ್ತಿದ್ದಾರೆ.