ಗೂನಡ್ಕ : ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ,ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಅರಂತೋಡು ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯ ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕ ದಲ್ಲಿ (ಆ.20 )ರಂದು ನಡೆಯಿತು.

ಶ್ರೀ ಶಾರದ ವಿದ್ಯಾ ಸಂಘ (ರಿ) ಗೂನಡ್ಕದ ಆಡಳಿತ ಮಂಡಳಿಯ ಸಂಚಾಲಕರಾದ ಎಸ್ . ಪಿ ಲೋಕನಾಥ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ , ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೈೂಂಗಾಜೆ, ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಚಂದ್ರ ಕಲ್ಲಗದ್ದೆ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಧನಲಕ್ಮಿ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಶಿಕ್ಷಕರ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳು, ಶಾಲಾ ಆಡಳಿತ ಮಂಡಳಿಯ ನಿರ್ದೇಶಕರು, ಸಂಪಾಜೆ ವರ್ತಕರ ಸಂಘದ ಅಧ್ಯಕ್ಷರಾದ ಯು ಬಿ ಚಕ್ರಪಾಣಿ, ಶ್ರೀಮತಿ ಮಮತಾ ಕೆ, ಸಮೂಹ ಸಂಪನ್ಮೂಲ ವ್ಯಕ್ತಿ ಅರಂತೋಡು ಕ್ಲಸ್ಟರ್,ಎಸ್ ಡಿ ಎಂ ಸಿ ಯಾ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ಸುಸೂತ್ರವಾಗಿ ನೆರವೇರುವುದರೊಂದಿಗೆ ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ ಮರ್ಕಂಜ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನ ಇವರು ಪಡೆದುಕೊಂಡರು. ಹಾಗೆಯೇ ಕಿರಿಯರ ವಿಭಾಗದ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕ ಹಾಗೂ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದಾಸರಬೈಲು ಇವರು ಪಡೆದುಕೊಂಡರು.


ಕಾರ್ಯಕ್ರಮದಲ್ಲಿ ಅರಂತೋಡು ಕ್ಲಸ್ಟರ್ ಎಲ್ಲಾ ಮುಖ್ಯ ಶಿಕ್ಷಕರುಗಳು, ಸಹ ಶಿಕ್ಷಕರು, ಸುಳ್ಯ ತಾಲೂಕಿನ ಬಿ ಆರ್ ಪಿ ಗಳು, ಸಿ ಆರ್ ಪಿ ಗಳು ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು ,ಎಸ್ ಡಿ ಎಂ ಸಿ ಪದಾಧಿಕಾರಿಗಳು, ಪೋಷಕರು, ವಿದ್ಯಾರ್ಥಿಗಳು ,ಊರ ವಿದ್ಯಾ ಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರ್ವರನ್ನು ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹನುಮಂತಪ್ಪ ಜಿ ಇವರು ಸ್ವಾಗತಿಸಿ, ಗೌರವ ಶಿಕ್ಷಕಿ ಭವಿತ ಕೆ .ಪಿ ಇವರು ಧನ್ಯವಾದಿಸಿ ,ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಅರಂಬೂರು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಧನಂಜಯ ಕಾರ್ಯಕ್ರಮವನ್ನು ನಿರೂಪಿಸಿದರು.