ಪೇರಾಲು ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

0

ರಾಷ್ಟ್ರೀಯ ಬಾಹ್ಯಾಕಾಶದ ದಿನಾಚರಣೆಯ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.


ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ದ ಜೊತೆಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಬೆಳೆಸುವ ಪ್ರಯತ್ನ ಮಾಡಲಾಯಿತು.
ರಾಕೆಟ್ ಮಾದರಿ ತಯಾರಿ ಮೂಲಕ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಅಭಿರುಚಿ ಬೆಳೆಸುವ ಪ್ರಯತ್ನ ಮಾಡಲಾಯಿತು.


ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಿಲ್ಪಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹಿರಿಯ ಶಿಕ್ಷಕರಾದ ವೆಂಕಟರಾಜು ಇವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕಿಯಾದ ಶ್ರೀಮತಿ ನಮ್ಯ ಇವರು ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿದರು. ಶಾಲಾ ನಾಯಕಿ ಕುಮಾರಿ ಹಿತಾಶ್ರೀ ಕಾರ್ಯಕ್ರಮ ನಿರೂಪಿಸಿದರು.