ಐವರ್ನಾಡಿನಲ್ಲಿ ವಿವಿಧ ಇಲಾಖೆಯಲ್ಲಿ ಲಭ್ಯವಾಗುವ ಯೋಜನೆಗಳ ಮಾಹಿತಿ ಮತ್ತು ನೋಂದಣಿ ಶಿಬಿರ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಹಕಾರದೊಂದಿಗೆ ಸರಕಾರದ ವಿವಿಧ ಇಲಾಖೆಗಳ ಅಡಿಯಲ್ಲಿ ಲಭ್ಯವಾಗುವ ಯೋಜನೆ ಮತ್ತು ತಿದ್ದುಪಡಿ,ನೋಂದಣಿ ಶಿಬಿರವು ಆ.23 ರಂದು ಐವರ್ನಾಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.


ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಐವರ್ನಾಡು ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿಸರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸುಳ್ಯ ಅಂಚೆ ಪಾಲಕರಾದ ಮೋಹನ್,ಮೆಸ್ಕಾಂ ಕಿರಿಯ ಅಭಿಯಂತರ ಪ್ರಸಾದ್ ಕತ್ಲಡ್ಕ, ಗ್ರಾಮ ಆಡಳಿತ ಅಧಿಕಾರಿ ಸುಜನ್,ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಉಪಸ್ಥಿತರಿದ್ದರು.


ಗ್ರಾಮ ಪಂಚಾಯತ್ ಪಿಡಿಒ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.


ಭಾರತೀಯ ಅಂಚೆ ಇಲಾಖೆಯ ವಿವಿಧ ಉಳಿತಾಯ ಯೋಜನೆಗಳು,ವಿಮಾ ಯೋಜನೆಗಳು,ಸಮಗ್ರ ರಕ್ಷಣಾ ಯೋಜನೆಗಳ ಮಾಹಿತಿ ಕೃಷಿ ನೀರಾವರಿ ಪಂಪು ಸೆಟ್ಟುಗಳ ವಿದ್ಯುತ್ ಮೀಟರ್ ಹೆಸರು ಬದಲಾವಣೆ ಹಾಗೂ ಮೀಟರ್ ಸಂಖ್ಯೆಗೆ ಆಧಾರ್ ಜೋಡಣೆ. ಕೃಷಿಕರ ಪಹಣಿ ಪತ್ರಕ್ಕೆ ಆಧಾರ್ ಜೋಡಣೆ ಆಧಾರ್ ಚೀಟಿ ತಿದ್ದುಪಡಿ ನಡೆಯಿತು. ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.