ಪ್ರಾಥಮಿಕ ಶಾಲಾ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರದಲ್ಲಿ ಆ. 22ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬಾಲಕರ ತಂಡವು ವಿಜಯಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಬೆಸ್ಟ್ ಡಿಫೆಂಡರ್ ಅಬ್ದುಲ್ ಅಶ್ಪಾನ್ 7ನೇ ತರಗತಿ, ಬೆಸ್ಟ್ ಸ್ಟ್ರೈಕರ್ ಆಗಿ ಮಹಮ್ಮದ್ ಫರ್ ಹಾನ್ 6ನೇ ತರಗತಿ ವೈಯಕ್ತಿಕ ಬಹುಮಾನ ಪಡೆದರು.

ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ತರಬೇತಿ ನೀಡಿದರು.