ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ರಕ್ಷಾ ಬಂಧನ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಗಸ್ಟ್ 23ರಂದು ಸಂಜೆ ವಾರದ ಭಜನಾ ಕಾರ್ಯಕ್ರಮದ ಬಳಿಕ ನಡೆಯಿತು.


ಬೆಳ್ಳಾರೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಚಂದ್ರಶೇಖರ ಪನ್ನೆ ರಕ್ಷಾ ಬಂಧನದ ಸಂದೇಶವನ್ನು ವಾಚಿಸಿದರು.

ದೇವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ನೂರಾರು ಭಕ್ತರು ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡು ಶುಭಾಶಯ ಕೋರಿದರು. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.