ಸಂಪಾಜೆ ಸಹಕಾರಿ ಸಂಘಕ್ಕೆ ಸಹಕಾರ ಸಂಘಗಳ ಅಪರ ನಿಬಂಧಕರ ಭೇಟಿ

0


ಬೆಂಗಳೂರು ಕೇಂದ್ರ ಕಚೇರಿಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಎಚ್. ಬಾಲಶೇಖರ್ ರವರು ಆ.23 ರಂದು ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಪರವಾಗಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಗೌರವಿಸಿದರು.


ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್., ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ರಘು, ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ನಿರ್ದೇಶಕರು ಹಾಗೂ ಕಟ್ಟಡ ಕಾರ್ಮಿಕ ಮಂಡಳಿಯ ರಾಜ್ಯ ಸದಸ್ಯರಾದ ಜಾನಿ ಕೆ.ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.