ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ: ರೋಟರಿ ಪ್ರೌಢಶಾಲೆಯ ಸ್ಕಂದಕೃಷ್ಣ ಜಿಲ್ಲಾಮಟ್ಟಕ್ಕೆ

0

ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸ್ತಕ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಿತ್ತಡ್ಕ ಇಲ್ಲಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸ್ಕಂದ ಕೃಷ್ಣ ಇವರು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ವಿಜ್ಞಾನ ಶಿಕ್ಷಕರಾದ ಶ್ರೀಮತಿ ಶಾಲಿನಿ ಮತ್ತು ಜಿತೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ.