ವಿನೋಬನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿನೋಬನಗರ ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಪ್ರೌಢಶಾಲೆಯಲ್ಲಿ ಆ.22ರಂದು ನಡೆಯಿತು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು.

ಜಾಲ್ಸೂರು ವಲಯದ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಭಾಸ್ಕರ ಅಡ್ಕಾರು ರವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ.
ಟ್ರಸ್ಟ್ ಸುಳ್ಯದ ಯೋಜನಾಧಿಕಾರಿ ಮಾಧವ ಗೌಡ, ಜಾಲ್ಸೂರು ಗೇಟ್ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ನಳಿನಿ ಶಿವಾನಂದ, ಜಾಲ್ಸೂರು ವಲಯದ ಮೇಲ್ವಿಚಾರಕ ತೀರ್ಥರಾಮ, ಸೇವಾಪ್ರತಿನಿಧಿಗಳಾದ ಬಾಲಕೃಷ್ಣ ಅಡ್ಕಾರು, ಚಂದ್ರಕಲಾ ಅಡ್ಕಾರು ಉಪಸ್ಥಿತರಿದ್ದರು.
ಶಿಕ್ಷಕ ವೃಂದ ಮತ್ತು ಶಾಲೆಯ ಮಕ್ಕಳು ಮಾಹಿತಿ ಪಡಕೊಂಡರು.