ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನದ ಮಂಜೂರಾತಿ ಪತ್ರ ವಿತರಣೆ

0

ಡಾ.ರೇಣುಕಾಪ್ರಸಾದ್ ಕೆ.ವಿ.ಯವರಿಂದ ಉದ್ಘಾಟನೆ- ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ

ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥ ಳಗ್ರಾಮಾಭಿವೃಧ್ಧಿಯೋಜನೆ ಬಿ.ಸಿ ಟ್ರಸ್ಟ್‌ ವತಿಯಿಂದ ಆ. 24 ರಂದು ಸುಜ್ಞಾನ ನಿಧಿ ಶಿಷ್ಯ ವೇತನದ ಮಂಜೂರಾತಿ ಪತ್ರಗಳ ವಿತರಣಾಕಾರ್ಯಕ್ರಮವು ಕೆ.ವಿ.ಜಿತಾಂತ್ರಿಕಮಹಾವಿದ್ಯಾಲಯದಸಭಾಂಗಣದಲ್ಲಿ ಜರುಗಿತು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ಬಿ ‘ ಇದರ ಅಧ್ಯಕ್ಷರಾದ ಡಾ| ರೇಣುಕಾಪ್ರಸಾದ್ ಕೆ.ವಿ ಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನದ ಮಂಜೂರಾತಿ ಪತ್ರವನ್ನು ಸಾಂಕೇತಿಕವಾಗಿ ವಿತರಿಸಿದರು.

ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಅಧ್ಯಕ್ಷತೆ ವಹಿಸಿದ್ದರು.

ಧ.ಗ್ರಾ.ಯೋಜನೆಯ ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ರವರು ಮಾತನಾಡಿ” ಸಾಮಾನ್ಯ ಕಟ್ಟ ಕಡೆಯ ವ್ಯಕ್ತಿ ಸ್ವಾಭಿಮಾನ ಜೀವನದ ಮೂಲಕ ಮುಖ್ಯ ವಾಹಿನಿಗೆ ಬರಬೇಕು ಎಂಬ ಧ್ಯೇಯ ಉದ್ಧೇಶ ಯೋಜನೆಯದಾಗಿದೆ. ತಾಲೂಕಿನಲ್ಲಿ ಈಗಾಗಲೇ 250 ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸುಮಾರು 40 ಲಕ್ಷ ಮೊತ್ತದ ವೇತನ ವಿತರಿಸಲಾಗಿದೆ ಇದರ ಸದ್ಭಳಕೆ ವಿದ್ಯಾರ್ಥಿಗಳು ಸಮರ್ಪಕವಾಗಿ ನಿರ್ವಹಿಸಬೇಕೆಂಬುದು ಪೂಜ್ಯರ ಆಶಯವಾಗಿದೆ ಎಂದು ಹೇಳಿದರು.

ಸರಕಾರದ ಮೂಲಕ ಮಾಡಬೇಕಾದ ಕೆಲವೊಂದು ಕಾರ್ಯವನ್ನು ಧರ್ಮಸ್ಥಳ ಯೋಜನೆ ಪೂರೈಸುತ್ತಿದೆ. ಶಿಕ್ಷಣದ ವ್ಯವಸ್ಥೆಗೆ ಪೂರಕವಾಗಿ ಸುಜ್ಞಾನ ನಿಧಿ ವೇತನ ನೀಡುವುದರೊಂದಿಗೆ ವಿದ್ಯಾರ್ಥಿಗಳು ತಮ್ಮ ಸದೃಢ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೇರಣೆಯಾಗಿ ಕೈ ಜೋಡಿಸಿರುವುದು ಶ್ಲಾಘನೀಯ ಎಂದು ಕೆ.ವಿ.ಜಿ ಸಮೂಹ ವಿದ್ಯಾಸಂಸ್ಥೆಗಳ ಕಮಿಟಿ ಬಿ’ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಡಾ| ಉಜ್ವಲ್ ಯು.ಜೆ.ಯವರು ಹೇಳಿದರು.

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣ, ಸುಳ್ಯ ನಗರ ಪಂಚಾಯತ್
ಮುಖ್ಯಾಧಿಕಾರಿ ಸುಧಾಕರ್ ಎಂ.ಹೆಚ್,
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ್ ಅಮೆಚೂರ್, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಮಂಜುನಾಥೇಶ್ವರ ಭಜನಾ ಪರಿಷತ್ ನಿಕಟ ಪೂರ್ವ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ, ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್‌ ಕುಮಾರ್, ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ,ಕೆ.ವಿ.ಜಿ.
ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ| ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯೋಜಕಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆ
ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯೋಗಿಶ್ ಪ್ರಾರ್ಥಿಸಿದರು.
ತಾಲೂಕು ಯೋಜನಾಧಿಕಾರಿ ಮಾಧವ ಗೌಡ ರವರು ಸ್ವಾಗತಿಸಿದರು.ಕಚೇರಿ ಸಿಬ್ಬಂದಿ ಅತೀಶ್ ವಂದಿಸಿದರು. ಅಮಿತ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘದ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಜನಜಾಗೃತಿ, ಭಜನಾ ಪರಿಷತ್, ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಭಾಗವಹಿಸಿದರು.