ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ಚಾಲನೆ

0

ಸುಳ್ಯ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆಯಿತು.
ಸ್ಪರ್ಧೆಗಳಿಗೆ ಶಾಲಾ ಸಂಚಾಲಕ ಜಾಕೆ ಸದಾನಂದ ಚಾಲನೆ ನೀಡಿದರು.
ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಎ ವಹಿಸಿದರು.


ಅತಿಥಿಗಳಾಗಿ ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಆಶಾ ನಾಯಕ್ ಭಾಗವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಎಸ್. ಡಿ.ಎಂ.ಸಿ ಅಧ್ಯಕ್ಷ ಸಿ. ಹೆಚ್. ಅಬ್ದುಲ್ ಖಾದರ್, ಬಿಆರ್ ಪಿ ಸುಂದರ ಇದ್ದರು.


ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ಸ್ವಾಗತಿಸಿ, ಶಿಕ್ಷಕ ಶಿವಪ್ರಕಾಶ ಕೆ ವಂದಿಸಿದರು. ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಕೆ ಕಾರ್ಯಕ್ರಮ ನಿರ್ವಹಿಸಿದರು.