ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘ ನಿ. ಇದರ ೨೦೨೩-೨೪ ನೇ ಸಾಲಿನ ವಾರ್ಷಿಕ ಮಹಾ ಸಭೆ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆ ಬೆಳಿಗ್ಗೆ ೧೦.೩೦ ಕ್ಕೆ ಆರಂಭಗೊಳ್ಳಲಿದ್ದು, ಸಂಸ್ಥೆಯ ಅಧ್ಯಕ್ಷ ಐ.ಕೆ. ಮಹಮ್ಮದ್ ಇಕ್ಬಾಲ್‌ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಂಘದ ಎಲ್ಲಾ ಸದಸ್ಯರು ಸಭಾ ಕಲಾಪದಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಐ. ತಿಳಿಸಿದ್ದಾರೆ.