ಕೆವಿಜಿ ಅಮರಜ್ಯೋತಿ ಪಿ.ಯು. ವಿದ್ಯಾರ್ಥಿಗಳಿಗೆ ಡಾ. ರೇಣುಕಾ ಪ್ರಸಾದ್ ಕೆ ವಿಯವರಿಂದ ಸನ್ಮಾನ

0

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ವ್ಯವಸ್ಥೆ ಕಲ್ಪಿಸಿಕೊಟ್ಟ ಡಾ. ರೇಣುಕಾ ಪ್ರಸಾದ್ ಕೆವಿಯವರ ಕಾರ್ಯ ಶ್ಲಾಘನೀಯ -ಡಾ. ಉಜ್ವಲ್ ಯು ಜೆ.

ಕೆವಿಜಿ ಅಮರಜ್ಯೋತಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ಸುರೇಶ್ ಮತ್ತು ದಾಕ್ಷಯಿಣಿ ದಂಪತಿಯ ಪುತ್ರಿ ಬೃಂದಾ ಸುರೇಶ್ ಹಾಗೂ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆದು ರಾಜ್ಯಕ್ಕೆ 7ನೇ ರ‌್ಯಾಂಕ್ ಪಡೆದ ಹೇಮಪ್ರಕಾಶ್ ಮತ್ತು ವಂದನಾ ದಂಪತಿಗಳ ಪುತ್ರಿ ಸಂಜನಾ ರಾವ್ ಹೆಚ್ ಇವರನ್ನು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ.ವಿ ಹಾಗೂ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಮತ್ತು ಕಾಲೇಜಿನ ಸಿಇಒ ಡಾ. ಉಜ್ವಲ್ ಯು.ಜೆಯವರು ಸನ್ಮಾನಿಸಿ ಪ್ರೋತ್ಸಾಹ ಧನವನ್ನು ನೀಡಿ ಶುಭ ಹಾರೈಸಿದರು.

ಕಾರ್ಯಕ್ರದಲ್ಲಿ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ರವರು ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಯನ್ನು ಸುಳ್ಯ ತಾಲೂಕಿನ ವಿದ್ಯಾರ್ಥಿಗಳಿಗೆ ದೊರಕಿಸಿಕೊಟ್ಟ ಕಾಲೇಜಿನಲ್ಲಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆವಿ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತಾ ಬೃಂದಾ ಸುರೇಶ್ ರವರಿಗೆ ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಹಾಗೂ ಕಾಲೇಜಿನ ಉಪನ್ಯಾಸಕರು, ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ಸುರೇಶ್ ವಿ, ಪ್ರಸನ್ನ ಕಲ್ಲಾಜೆ, ವಸಂತ ಕಿರಿಭಾಗ, ಕಮಲಾಕ್ಷ ನಂಗಾರು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.