ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ತಾ.ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಆ. 24ರಂದು ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ, ಸಿ.ಆರ್.ಪಿ ಸಮೂಹ ಸಂಪನ್ಮೂಲ ಕೇಂದ್ರ ಎಣ್ಮೂರು ಜಯಂತ್ ಉಪಸ್ಥಿತರಿದ್ದರು. ಸುಳ್ಯ ತಾಲೂಕಿನ ಸುಮಾರು 19 ಪ್ರೌಢಶಾಲೆಗಳ 58 ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡರು.


ಅಪರಾಹ್ನ ಸಮಾರೋಪ ಸಮಾರಂಭ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಕೋಶಾಧಿಕಾರಿ ಕೈಂತಜೆ ರಾಮ ಭಟ್ ಅಧ್ಯಕ್ಷತೆ ವಹಿಸಿದರು. ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಕೆ.ಪಿ.ಎಸ್ ಬೆಳ್ಳಾರೆ ಪ್ರೌಢಶಾಲೆ ಪ್ರಥಮ, ಸರಕಾರಿ ಪ್ರೌಢಶಾಲೆ ಎಣ್ಮೂರು ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಸರಕಾರಿ ಪ್ರೌಡಶಾಲೆ ಏನೆಕಲ್ಲು ಗಳಿಸಿತು. ಗುಂಪು ವಿಭಾಗದಲ್ಲಿ ಭಗವಾನ್ ಶ್ರೀ ಸತ್ಯಸಾಯಿ ಪ್ರೌಢಶಾಲೆ ಪ್ರಥಮ, ಕುಮಾರಸ್ವಾಮಿ ಪ್ರೌಢಶಾಲೆ ಸುಬ್ರಹ್ಮಣ್ಯ ದ್ವಿತೀಯ, ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ತೃತೀಯ ಬಹುಮಾನಗಳಿಸಿತು. ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯಶೋಧರ ಎನ್ ಸ್ವಾಗತಿಸಿ, ಶ್ರೀಮತಿ ಸಹನಾ ಬಿ.ಬಿ ವಂದಿಸಿದರು. ವಿದ್ಯಾಬೋಧಿನೀ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಉದಯಕುಮಾರ್ ರೈ ಕಾರ್ಯಕ್ರಮ ನಿರ್ವಹಿಸಿದರು.