ಮಿನುಂಗೂರು : ದುರ್ಗಾಪರಮೇಶ್ವರಿ ಭಜನಾ ಮಂಡಳಿ‌ ವತಿಯಿಂದ ಅಷ್ಟಮಿ ಆಚರಣೆ

0

ಮರ್ಕಂಜದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ದೇವಸ್ಥಾನದ ವಠಾರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಪ್ರಯುಕ್ತ ಭಜನಾ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಶ್ರೀ ಕೃಷ್ಣನ ವೇಷ ಸ್ಪರ್ಧೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಹಾಗೂ ಭಕ್ತರು ಉಪಸ್ಥಿತರಿದ್ದರು.