ಕೊಡಗು ಸಂಪಾಜೆ: ಬ್ರೇಕ್ ವೈಫಲ್ಯಗೊಂಡು ತೋಟಕ್ಕೆ ಪಿಕಪ್ ಪಲ್ಟಿ

0

ಬ್ರೇಕ್ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾಗಿ, ಚಾಲಕ ಸೇರಿದಂತೆ ಐವರು ಗಾಯಗೊಂಡ ಘಟನೆ ಕೊಡಗು ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ಆ.28ರಂದು ಬೆಳಿಗ್ಗೆ ಸಂಭವಿಸಿದೆ.

ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್ ಅವರು ಕುಂಟಿಕಾನಕ್ಕೆ ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ವೇಳೆ ಕುಂಟಿಕಾನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು ಕೆಲಸದಾಳುಗಳಿಗೆ ಗಾಯವಾಗಿದ್ದು, ಸ್ಥಳೀಯರು ಸೇರಿ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪಿಕಪ್ ವಾಹನ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.