ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ

0

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಿತ್ತಡ್ಕ ಇಲ್ಲಿಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ವಿಜ್ಞಾನ ಶಿಕ್ಷಕರಾದ ಶ್ರೀಮತಿ ಶಾಲಿನಿ ಮತ್ತು ಜಿತೇಶ್ ಮಾರ್ಗದರ್ಶನ ನೀಡಿರುತ್ತಾರೆ.