ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದಂತಹ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಸೈಂಟ್ ಜೋಸೆಫ್ ಶಾಲೆ ಸುಳ್ಯ ಇಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿನೋಬಾನಗರದ ವಿವೇಕಾನಂದ ವಿದ್ಯಾ ಸಂಸ್ಥೆಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಹನಾ ಏಳನೇ ತರಗತಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮೋಕ್ಷಿತ ಏಳನೇ ತರಗತಿ ಬೆಸ್ಟ್ ಸ್ಮಾಶರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.