ಸುಳ್ಯ‌ ನಗರ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಗೆ ಚುನಾವಣೆ

0

ನಾಮಪತ್ರ ಸಲ್ಲಿಕೆ ಆರಂಭ

ಸುಳ್ಯ‌ ನಗರ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಗೆ ನಾಮಪತ್ರ ಸಲ್ಲಿಕೆ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕ ರವರು ನಾಮಪತ್ರ ಸಲ್ಲಿಸಿದ್ದಾರೆ. ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಸುಳ್ಯ ನ. ಪಂ ಸಭಾಂಗಣದಲ್ಲಿ ನಡೆಯಿತು.

.

ಚುನಾವಣಾ ಅಧಿಕಾರಿ ಗಳಾಗಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನ ಪಂ ಮುಖ್ಯಾಧಿಕಾರಿ ಸುಧಾಕರ್,ಡೆಪ್ಯೂಟಿ ತಹಶೀಲ್ದಾರ್ ಚಂದ್ರಕಾಂತ್ ಉಪಸ್ಥಿತರಿದ್ದಾರೆ.
ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಟಿ.ಕುಸುಮಾದರ, ಆಶಾ ತಿಮ್ಮಪ್ಪ, ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು