ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

0

ಸಂಪಾಜೆ ಪ .ಪೂ. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆಯು ಆ.28ರಂದು ನಡೆಯಿತು.

ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕ ಎಂ. ಶಂಕರನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಗೊಳಿಸಿ, ಉದ್ಘಾಟಿಸಿ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಲೋಕ್ಯಾನಾಯ್ಕ್ ಅವರು ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಎ. ಐತ್ತಪ್ಪರವರರು ಶುಭಹಾರೈಸಿದರು.


ಸಮಾಜಶಾಸ್ತೃ ಉಪನ್ಯಾಸಕಿ ಶ್ರೀಮತಿ ಶ್ರೀವಿದ್ಯಾ, ಎಂ. ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಲೆಕ್ಕಶಾಸ್ತೃದ ಉಪನ್ಯಾಸಕಿ ಶ್ರೀಮತಿ ವಿನುತ ಯಂ. ಅವರು ವಂದಿಸಿದರು. ಕಾಲೇಜು ವಿಭಾಗದ ಎಲ್ಲಾ ಉಪನ್ಯಾಸಕರು, ಹೆಚ್ಚಿನ ಪೋಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.