ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾ. ಮಟ್ಟದ ಪ್ರಾಥಮಿಕ ಶಾಲಾ ವಾಲಿಬಾಲ್ ಪಂದ್ಯಾಟ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಕ್ರೀಡಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ನಡೆಯಿತು.

ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಅಸೋಸಿಯೇಟ್ ಸೆಕ್ರೆಟರಿ ಎನ್ ಜಯಪ್ರಕಾಶ್ ರೈ ಸ್ಪರ್ಧೆಗಳಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ ಆದರೆ ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಪಂದ್ಯದಲ್ಲಿ ಭಾಗವಹಿಸಿ ಎಂದು ಶುಭ ಕೋರಿದರು.

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ’ಸೋಜಾ ಸಭಾಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಸುಳ್ಯ ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರ ಕ್ರಾಸ್ತಾ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಕೆ ಶೀತಲ್, ಸಿಆರ್‌ಪಿ ಮಮತಾ,ಸೈoಟ್ ಜೋಸೆಫ್ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಪ್ರಭೋದ್ ಶೆಟ್ಟಿ, ಶಶಿಧರ ಎಂ ಜೆ, ಹೇಮನಾಥ್. ಬಿ , ಸೈಂಟ್ ಬ್ರಿಜಿಡ್ ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಜೂಲಿಯಾ ಕ್ರಾಸ್ತಾ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಇಡ್ಯಡ್ಕ, ಸಂತ ಜೋಸೆಫ್ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಹುಲ್ ಜಿ ದಾಸ್ ಉಪಸ್ಥಿತರಿದ್ದರು. ಸುಳ್ಯ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಆಶಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ವಾಲಿಬಾಲ್ ಸಂಘಟಿಸಿದಕ್ಕಾಗಿ ಪ್ರಮಾಣ ಪತ್ರ ನೀಡಿ ವಿದ್ಯಾಸಂಸ್ಥೆಗೆ ಶುಭ ಹಾರೈಸಿದರು.

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

ವಾಲಿಬಾಲ್ ಪಂದ್ಯಾಟದ ಯಶಸ್ವಿಗಾಗಿ ವಿದ್ಯಾ ಸಂಸ್ಥೆಯ ಎಲ್ಲ ಸಿಬ್ಬಂದಿಗಳು, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.