ತಾಲೂಕು ಮಟ್ಟದ ಪ್ರಾಥಮಿಕ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಸಮಾರೋಪ

0

ಸೈಂಟ್ ಬ್ರಿಜಿಡ್ಸ್ , ವಿವೇಕಾನಂದ ವಿನೋಬಾ ನಗರ ವಿನ್ನರ್ : ಬ್ರಿಜಿಡ್ಸ್, ಕೆಪಿಎಸ್ ರನ್ನರ್

ಶಾಲಾ ಶಿಕ್ಷಣ ಇಲಾಖೆ ಹಾಗೂ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಕ್ರೀಡಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ನಡೆಯಿತು.

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ’ಸೋಜಾ ಸಭಾಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಸೈoಟ್ ಜೋಸೆಫ್ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಪ್ರಭೋದ್ ಶೆಟ್ಟಿ, ಶಶಿಧರ ಎಂ ಜೆ, ಹೇಮನಾಥ್ , ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಆಂಟೋನಿಮೇರಿ, ಕೆ. ಪಿ. ಎಸ್ ಬೆಳ್ಳಾರೆಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಮಾಯಿಲಪ್ಪ, ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲ, ವೇದಿಕೆಯಲ್ಲಿ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸಂತ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಹಾಗೂ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು .
ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಕೆ.ಪಿ.ಎಸ್ ಬೆಳ್ಳಾರೆ ಹಾಗೂ ಬಾಲಕಿಯರ
ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸೈಂಟ್ ಬ್ರಿಜಿಡ್ಸ್ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಪಡೆದುಕೊಂಡಿತು

ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉಮೇಶ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
ವಾಲಿಬಾಲ್ ಪಂದ್ಯಾಟದ ಯಶಸ್ವಿಗಾಗಿ ವಿದ್ಯಾ ಸಂಸ್ಥೆಯ ಎಲ್ಲ ಸಿಬ್ಬಂದಿಗಳು, ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.