ಶಾಲಾ ಪ.ಪೂ. ಶಿಕ್ಷಣ ಇಲಾಖೆ ಮತ್ತು ಎನ್.ಎಂ.ಪಿ.ಯು ಕಾಲೇಜು ಆಶ್ರಯದಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

0

ಪ.ಪೂ. ಶಿಕ್ಷಣ ಇಲಾಖೆ ಮತ್ತು ಎನ್.ಎಂ.ಪಿ.ಯು ಕಾಲೇಜು ಸುಳ್ಯ ಇವುಗಳ ಆಶ್ರಯದಲ್ಲಿ 2024 -25 ನೇ ಸಾಲಿನ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಆ. 30ರಂದು ಸುಳ್ಯದ ಕೊಡಿಯಾಲಬೈಲ್ ನ ಗೌಡ ಸಮುಧಾಯ ಭವನದಲ್ಲಿ ನಡೆಯಿತು.


ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಅಧ್ಯಕ್ಷತೆಯನ್ನು ಎ.ಒ.ಎಲ್.ಇ. ಅಧ್ಯಕ್ಷ ಡಾ. ಕೆ.ವಿ ಚಿದಾನಂದ ವಹಿಸಿ ಮಾತನಾಡುತ್ತಾ ಸುಳ್ಯದಂತಹ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತೆ ಮಾಡಿದ ಕೀರ್ತಿ ಕೆವಿಜಿ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನದ್ದು ಎನ್ನುತ್ತಾ ಶುಭ ಹಾರೈಸಿದರು. ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್ ಗಂಗಾಧರ ಕ್ರೀಡಾಕೂಟ ಉದ್ಘಾಟಿಸಿದರು. ಉಬರಡ್ಕ ಮಿತ್ತೂರು ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಸೂಂತೋಡು, ಎಮ್.ಜಿ ಎಮ್ ಪ್ರೌಢಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು, ಎನ್.ಎಂ.ಪಿ.ಯು. ಕಾಲೇಜಿನ ಆಡಳಿತಧಿಕಾರಿ ಚಂದ್ರಶೇಖರ್ ಪೆರಾಲು, ತಾಲೂಕು ಸ್ಪೋರ್ಟ್ಸ್ ಕೋ.ಆರ್ಡಿನೇಟರ್ ಶಾಂತಿ ಎ.ಕೆ, ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ನಾಯ್ಕ್ ಭಟ್ಕಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರೊ ಕಬಡ್ಡಿ ಆಟಗಾರ ಅಭಿಷೇಕ್ ಕೆ.ಎಸ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರರದ ನಿತಿನ್ ವಿ. ನಾಯ್ಕ್ ರನ್ನು
ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಾದ ಚಿಂತನ್ ಮತ್ತು ಬಳಗದವರು ಪ್ರಾರ್ಥಿಸಿದರು, ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ ಪಿ ರೈ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿನಯ್ ನಿಡ್ಯಮಲೆ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಂಗಣವನ್ನು ಎ.ಒ.ಎಲ್.ಇ. ಕಾರ್ಯದರ್ಶಿ ಹೇಮಾನಾಥ್ ಕೆ.ವಿ, ತೆಂಗಿನಕಾಯಿ ಒಡೆಯುವುದರ ಮೂಲಕ ಕ್ರೀಡಾಂಗಣ ಉದ್ಘಾಟಿಸಿದರು.