ಸೆ.2: ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನ ಕಾರ್ಯಕ್ರಮ

0

ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಸನ್ಮಾನ ಕಾರ್ಯಕ್ರಮವು ಕಲ್ಲುಗುಂಡಿಯ ಸಮಸ್ವಯ ಸಭಾಂಗಣದಲ್ಲಿ ಸೆ.2ರಂದು ನಡೆಯಲಿದೆ.

ಕಾರ್ಯಕ್ರಮವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ವಹಿಸಲಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಅವರು ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಭರತ್ ಮುಂಡೋಡಿ, ಜಾನಿ ಕೆ.ಪಿ., ಹಮೀದ್ ಕುತ್ತಮೊಟ್ಟೆ, ರಾಜು (ಜ್ಞಾನ ಶೀಲನ್), ಶ್ರೀಮತಿ ಕಾಂತಿ ಬಿ.ಎಸ್. ಅವರನ್ನು ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಪುರುಷೋತ್ತಮ ಬಿಳಿಮಲೆ ಅವರು ಸನ್ಮಾ‌ನಿಸಲಿದ್ದಾರೆ.