ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮ

0

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿಬ್ಬಂದಿಗಳಿಗೆ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ ಆ. 31ರಂದು ನಡೆಯಿತು.
ಕೆವಿಜಿ ಕಾಲೇಜ್ ಆಫ್ ಎಂಜಿನಿಯರಿಂಗ್ ನ ಪ್ರಾಂಶುಪಾಲ ಡಾ. ಸುರೇಶ್ ಬಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ” ಎ ಮೋಟಿವೇಷನ್ ಟು ಕಂಪ್ಯೂಟರ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್” ಎಂಬ ವಿಷಯದಲ್ಲಿ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ವಿವೇಕ್ ಪಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕ ರಂಗಸ್ವಾಮಿ ವಂದಿಸಿದರು.