ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು, ಬ್ಲೋಸಮ್ ಆಂಗ್ಲ ಮಾಧ್ಯಮ ಶಾಲೆ ಬೆಳುವಾಯಿ ಇದರ ಜಂಟಿ ಆಶ್ರಯದಲ್ಲಿ ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆ 2024-25ರಲ್ಲಿ ರೋಶನ್ ಪಿ ಜೆ ಚತುರ್ಥ ಸ್ಥಾನ ಪಡೆದು ಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.
ಆ. 30ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಚತುರ್ಥ ಸ್ಥಾನ ಪಡೆದ ರೋಶನ್ ಪಿ.ಜೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿಯಾಗಿದ್ದು, ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ಯೋಗ ತರಬೇತಿ ನೀಡಿರುತ್ತಾರೆ. ಇವರು ಪೆರುವಾಜೆಯ ಜಯಚಂದ್ರ ಹಾಗೂ ಶೈನಿ ದಂಪತಿಗಳ ಪುತ್ರ.