ಅರಂತೋಡು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

0

ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.1ರಂದು ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ, ಎಸ್‌.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ , ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.