ಕಾಂಗ್ರೆಸ್ ಮುಖಂಡರಿಗೆ ಸನ್ಮಾನ ಹಾಗೂ ಗೌರವಾರ್ಪಣೆ
ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಗೊಂಡ ಡಾ. ಪುರುಷೋತ್ತಮ ಬಿಳಿಮಲೆ, ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾದ ಕೆ.ಪಿ. ಜಾನಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಸದಸ್ಯರುಗಳಾಗಿ ಆಯ್ಕೆಗೊಂಡ ರಾಜು (ಜ್ಞಾನ ಶೀಲನ್), ಶ್ರೀಮತಿ ಕಾಂತಿ ಬಿ.ಎಸ್. ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಬಲಡ್ಕ ಅವರಿಗೆ ಸನ್ಮಾನ ಕಾರ್ಯಕ್ರಮವು ಕಲ್ಲುಗುಂಡಿಯ ಸಮನ್ವಯ ಸಭಾಂಗಣದಲ್ಲಿ ಸೆ.2ರಂದು ಜರುಗಿತು.
ಕಾರ್ಯಕ್ರಮವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಉದ್ಘಾಟಿಸಿ, ಮಾತನಾಡಿದರು. ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮಾತನಾಡಿ ಧಾರ್ಮಿಕ ಕಟ್ಟುಪಾಡುಗಳ ಹೆಸರಿನಲ್ಲಿ ನಡೆಯುವ ಕೋಮು ಪ್ರಚೋದನಾಕಾರಿ ಚಟುವಟಿಕೆಗಳನ್ನು ಖಂಡಿಸಿ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು.
ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ಅವರು ಅಭಿನಂದನಾ ಭಾಷಣ ಮಾಡಿದರು.
ವೇದಿಕೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ., ನಿವೃತ್ತ ಪ್ರಾಂಶುಪಾಲ ಪೂವಪ್ಪ ಕಣಿಯೂರು, ಕೊಡಗು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಪಿ.ಎಲ್. ಸುರೇಶ್, ಚೆಂಬು ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಸುಳ್ಯ ಇಂಟಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಅರಂತೋಡು ಗ್ರಾ.ಪಂ. ಸದಸ್ಯ ರವಿಪೂಜಾರಿ, ಕಾಂಗ್ರೆಸ್ ಮುಖಂಡ ಪ್ರವೀಣ್ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಬಿ.ಎಸ್. ಯಮುನ, ಕೆ.ಆರ್. ಜಗದೀಶ್ ರೈ ಸಂಪಾಜೆ, ತಿಮ್ಮಯ್ಯ ಗೌಡ ತೊಡಿಕಾನ, ಕೇಶವ ಕೊಳಲುಮೂಲೆ, ಹರಿಶ್ಚಂದ್ರ ಪಂಡಿತ್, ಲಿಸ್ಸಿ ಮೊನಾಲಿಸಾ, ಉಷಾ ರಾಮನಾಯ್ಕ, ಹೆಚ್.ಎ. ಹಮೀದ್, ಸುರೇಶ್ ಕಂಜರ್ಪಣೆ, ತಾಜ್ ಮಹಮ್ಮದ್, ಅಶೋಕ್ ಎಡಮಲೆ, ಎ.ಕೆ. ಇಬ್ರಾಹಿಂ, ವಸಂತ ಗೌಡ ಪೆಲ್ತಡ್ಕ, ಬೆಂಜಮಿನ್ ಡಿಸೋಜ, ಮೋನಪ್ಪ ರಾಜಾರಾಂಪುರ, ಪಿ.ಎ. ಉಮ್ಮರ್ ಗೂನಡ್ಕ, ಸೆಬಾಸ್ಟಿನ್, ಎ.ಕೆ. ಹನೀಫ್, ರುಡಾಲ್ಫ್ ಕ್ರಾಸ್ತ, ಶ್ರೀಧರ ಕಡಪಾಲ, ಸ್ಮಿತ, ಸಂಗೀತ, ಸಾಹುಕಾರ್ ಅಶ್ರಫ್, ಭರತ್ ಕುಕ್ಕುಜಡ್ಕ, ಯೂಸುಫ್ ಕಲ್ಲುಗುಂಡಿ ಸೇರಿದಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕೆ.ಪಿ.ಸಿ.ಸಿ. ವಕ್ತಾರ ಶೌವಾದ್ ಗೂನಡ್ಕ ಸ್ವಾಗತಿಸಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪಿ.ಕೆ. ಅಬೂಸಾಲಿ ವಂದಿಸಿದರು. ಸಂಪಾಜೆ ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಐ. ಲೂಕಾಸ್ ಕಾರ್ಯಕ್ರಮ ನಿರೂಪಿಸಿದರು.