ಯೋಗಾಸನದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ತನ್ವಿ ತಂಟೆಪ್ಪಾಡಿ

0

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಮಂಗಳೂರು
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡಬಿದಿರೆ
ಬ್ಲೊಸಂ ಆಂಗ್ಲ ಮಾಧ್ಯಮ ಶಾಲೆ, ಬೆಳುವಾಯಿ ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಇತ್ತೀಚೆಗೆ ಬ್ಲೊಸಂ ಆಂಗ್ಲ ಮಾಧ್ಯಮ ಶಾಲೆ, ಬೆಳುವಾಯಿಯಲ್ಲಿ ಆಯೋಜಿಸಲಾಗಿದ್ದು, ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ತನ್ವಿ ತಂಟೆಪ್ಪಾಡಿ ತೃತೀಯ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಅಕ್ಟೋಬರ್ 04 ಮತ್ತು 05 ರಂದು ಕಾರ್ಕಳದಲ್ಲಿ ವಿಭಾಗದ ಮಟ್ಟದ ಸ್ಪರ್ಧೆ ನಡೆಯಲಿದೆ.
ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕ ದಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು,ಇವರು ಕಳಂಜ ಗ್ರಾಮದ ತಂಟೆಪ್ಪಾಡಿ ನಿವಾಸಿ ಹರಿಶ್ಚಂದ್ರ ಮತ್ತು ಶ್ರೀಮತಿ ಜ್ಯೋತಿರವರ ಸುಪುತ್ರಿ.

ಇವರು ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕರಲ್ಲಿ ಯೋಗ ತರಬೇತಿ ಪಡೆಯುತ್ತಿದ್ದು , ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರತಿಭಾ ಎಸ್ ಆಳ್ವರವರು ಟೀಮ್ ಮ್ಯಾನೇಜರ್ ಆಗಿ ಸಂಪೂರ್ಣ ಸಹಕಾರವನ್ನು ನೀಡಿರುತ್ತಾರೆ.