ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ‘ಆಗಮನಮ್ 2024’ ಕಾರ್ಯಕ್ರಮ ಸ್ಟೂಡೆಂಟ್ ವೆಲ್ಫೇರ್ ಕೌನ್ಸಿಲ್ ನೇತೃತ್ವದಲ್ಲಿ ಆಗಸ್ಟ್ 30ರ ಶುಕ್ರವಾರದಂದು ನಡೆಯಿತು.
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್ ಎಮ್ ವಹಿಸಿದ್ದರು.
ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ ಮಮತಾ ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಸಾಂಸ್ಕೃತಿಕ ಸಂಯೋಜಕ ವಿಷ್ಣುಪ್ರಶಾಂತ್ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ದ್ವಿತೀಯ ಕಲಾ ಪದವಿ ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ಅಂತಿಮ ಬಿಕಾಂ ವಿದ್ಯಾರ್ಥಿ ಅದಿತ್ಯ ಸ್ವಾಗತಿಸಿ, ಅಂತಿಮ ಬಿಬಿಎ ವಿದ್ಯಾರ್ಥಿ ಸೂರ್ಯ ವಂದಿಸಿದರು. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರ ಹಾಗೂ ದ್ವಿತೀಯ ಬಿಸಿಎ ವಿದ್ಯಾರ್ಥಿ ಕೌಶಿಕ್ ಕಾರ್ಯಕ್ರಮ ನಿರೂಪಿಸಿದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಟ್ಟವು. ಹಾಗೆಯೇ ವಿವಿಧ ಮನೋರಂಜನ ಸ್ಪರ್ಧೆಗಳನ್ನೂ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.