ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಹೊಸತು ಪ್ರಯುಕ್ತ ವಿಶೇಷ ಪೂಜೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಹೊಸತು ಪ್ರಯುಕ್ತ ದೇವರಿಗೆ ವಿಶೇಷ ಪೂಜೆಯು ಸೆ.4ರಂದು ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಬೆಳಿಗ್ಗೆ ಉತ್ತರ ನಕ್ಷತ್ರದ ಶುಭದಿನದ ಪ್ರಯುಕ್ತ ಕದಿರು ಕಟ್ಟುವುದು,,ವಿಶೇಷ ಪೂಜೆ ನಡೆಯಿತು.
ಮಧ್ಯಾಹ್ನ ಮಕ್ಕಳಿಗೆ ಅನ್ನ ಕೊಡುವುದು, ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು, ದೇವತಕ್ಕರು, ತಕ್ಕಮುಖ್ಯಸ್ಥರುಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಮಾಜಿ ಮೊಕ್ತೇಸರರುಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.