ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು ಈಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರಾದಯವಾಗಿದ್ದು, ಇದರಿಂದಾಗಿ ನೈಸರ್ಗಿಕಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪಾರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ ಎಂದುಸುಳ್ಯ ನಗರ ಪಂಚಾಯತ್ ಸಾರ್ವಜನಿಕರಿಗೆ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸದರಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿ:20/07/22016 ರಂದು ಅಧಿಸೂಚನೆಯನ್ನು ಹೊರಡಿಸಿದ್ದು ಪ್ಲಾಸ್ಟರ್‌ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ, ಬಾವಿ,ಕಟ್ಟೆ ಮತ್ತು ಇತರ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣಾ ಮತ್ತು ನಿಯಂತ್ರಣಾ) ಕಾಯ್ದೆ 1974ರ ಕಲಂ 33(ಎ)ಅನ್ವಯರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.
ಸಿ ಸೆಕ್ಷನ್ 1850ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
ಗೌರಿ ಗಣೇಶ ಹಬ್ಬದ ಸಂದರ್ಭಗಳಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿ ಗಣೇಶ ಗಳನ್ನು ಪಟ್ಟಣ ಪಂಚಾಯತು ಸುಳ್ಯ ದಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನ್ನು ವಿಸರ್ಜಿಸುವುದು.
ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪಟ್ಟಣ ಪಂಚಾಯತು ನ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಳಕೆ ಮಾಡಬೇಡಿ.
ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು. ಮುಖ್ಯಾಧಿಕಾರಿ ತಿಳಿಸಿದ್ದಾರೆ.