ಅರಂಬೂರು ಅಂಬಿಕಾ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರ ದಿನಾಚರಣೆ

0

ಅರಂಬೂರು
ಅಂಬಿಕಾ ಮಹಿಳಾ ಮಂಡಲದ ವತಿಯಿಂದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಇಲ್ಲಿಯ ಶಿಕ್ಷಕ ವೃಂದದವರಿಗೆ, ಪರಿವಾರ ಕಾನ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸುವುದರೊಂದಿಗೆ ಶಿಕ್ಷಕರ ದಿನಾಚರಣೆಯ ನ್ನು ಸೆ.5ರಂದು ಆಚರಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮೀ ಉದ್ಘಾಟಿಸಿದರು.
ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಅಮಿತಾ ರೈ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಯಮಲಕ್ಷಿ ಪ್ರಾರ್ಥಿಸಿದರು. ಶ್ರೀಮತಿ ಚಂದ್ರಾವತಿ ಸ್ವಾಗತಿಸಿ, ಶ್ರೀಮತಿ ವೇದಾವತಿ ವಂದಿಸಿದರು. ಶ್ರೀಮತಿ ಹಾರಾವತಿಯವರು ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಯಾಗೊಂಡಿತು.