ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಕಟ್ಟುವ ಕಾರ್ಯಕ್ರಮ

0

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆಕಟ್ಟುವ ಕಾರ್ಯಕ್ರಮವು ಸೆ.05 ರಂದು ನಡೆಯಿತು.


ಶ್ರೀ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ ತೆನೆ ಕಟ್ಟುವ ಕಾರ್ಯಕ್ರಮ ನಡೆಯಿತು.
ಬಳಿಕ ನೂರಾರು ಜನ ಭಕ್ತಾದಿಗಳಿಗೆ ತೆನೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.