ದುಗ್ಗಲಡ್ಕದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆರಂಭ

0

ದುಗ್ಗಲಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ನಡೆಯುತಿದೆ.

ಬೆಳಿಗ್ಗೆ ಧ್ವಜಾರೋಹಣ, ಸ್ಥಳ ಶುದ್ಧಿ, ಗಣಪತಿ ಪ್ರತಿಷ್ಠೆ, ಗಣಪತಿ ಹವನ, ಮಕ್ಕಳಿಗೆ ಅಕ್ಷರಾಭ್ಯಾಸ ಬಳಿಕ ಭಜನಾ ಕಾರ್ಯಕ್ರಮ ನಡೆದು ಪೂ.11ರಿಂದ ಅಂಗನವಾಡಿ ಪುಟಾಣಿಗಳಿಂದ ಮತ್ತು ವಿದ್ಯಾರ್ಥಿಗಳಿಂದ ನೃತ್ಯ ವೈಭವ ಬಳಿಕ ವೀಕ್ಷಿತ್ ಕುತ್ಯಾಳ ಬಳಗದವರಿಂದ ಕೊಳಲು ವಾದನ ನಡೆಯಲಿದೆ.ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2ರಿಂದ ಅಭಿನವ ಡ್ಯಾನ್ಸ್ ಅಕಾಡೆಮಿ ಪೆರ್ನೆ ಸಾದರಪಡಿಸುವ ನಾಟ್ಯ ಗಣ ವೈಭವ ವಿಶೇಷ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ ವಿಶೇಷ ಆಕರ್ಷಣೆಯೊಂದಿಗೆ ಗಣಪತಿ ವಿಗ್ರಹದ ಶೋಭಾಯಾತ್ರೆ ನಡೆದು ಕಂದಡ್ಕ ಹೊಳೆಯಲ್ಲಿ ಜಲಸ್ಥಂಭನಗೊಳ್ಳಲಿದೆ.