SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ

0

ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ

ಸುಳ್ಯ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ನಡೆಯಿತು.

ಎಸ್‌ಡಿಪಿಐ ಸುಳ್ಯ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ, ಕೋಶಾಧಿಕಾರಿಯಾಗಿ ಸಿದ್ದೀಕ್ ಕೊಡಿಯಮ್ಮೆ, ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ, ಜೊತೆ ಕಾರ್ಯದರ್ಶಿಯಾಗಿ ಶಾಕಿರ್ ಪ್ಲಾಸ್ಟೂ ರವರು ಆಯ್ಕೆಯಾದರು.

ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ, ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ, ಕಾರ್ಯದರ್ಶಿ ಶರೀಫ್ ನಿಂತಿಕಲ್ ಉಪಸ್ಥಿತರಿದ್ದರು.