ಸಂಪಾಜೆ: ಆರ್.ಎಂ.ಎಸ್. ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಸಂಪಾಜೆಯ ಆರ್.ಎಂ.ಎಸ್. ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

9ನೇ ತರಗತಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಮಾಡಿದರು.

ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಶಿಕ್ಷಕರು ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡರು. 9ನೇ ತರಗತಿಯ ವಿದ್ಯಾರ್ಥಿಗಳಾದ ಯಶಸ್ ಸ್ವಾಗತಿಸಿ, ಅಬ್ದುಲ್ ರಹೀಮ್ ವಂದಿಸಿದರು. ನೋಮಿ ಜೋಶ್ನಿ ಫೆರ್ನಾಂಡಿಸ್ ಶಿಕ್ಷಕ ದಿನಾಚರಣೆಯ ಬಗ್ಗೆ ಮಾತನಾಡಿದರು. ಯತಿನ್ ಕಾರ್ಯಕ್ರಮ ನಿರೂಪಿಸಿದರು.