ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಗಣೇಶ ಚತುರ್ಥಿ

0

ಸುಳ್ಯಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನಕಾಯಿ ಗಣಪತಿ ಹವನ ಹಾಗೂ ಇತರೆ ವೈದಿಕ ಕಾರ್ಯಕ್ರಮಗಳು ಸೆ.7ರಂದು ನಡೆಯಿತು.

ದೇಗುಲದ ಪ್ರಧಾನ ಅರ್ಚಕ ಕೇಶವಮೂರ್ತಿ ಅವರ ನೇತೃತ್ವದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಕದಿರು ಪೂಜೆ ಹಾಗೂ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ದೇಗಲದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.