ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಸಭಾ ಕಾರ್ಯಕ್ರಮ

0

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ-2024 ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.7 ರಿಂದ ಆರಂಭ ಗೊಂಡಿದ್ದು ಸೆ.9 ತನಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿದೆ.

ಸೆ.8ರಂದು ರಾತ್ರಿ ಸಭಾ ಕಾರ್ಯಕ್ರಮ ನಡೆಯಿತು. ಗ್ರೀನ್ ಹೀರೋ ಆಪ್ ಇಂಡಿಯಾ , ಪರಿಸರ ತಜ್ಞ ಡಾ.ಆರ್. ಕೆ ನಾಯರ್ ಉಪನ್ಯಾಸ ನೀಡಿದರು.

” ಡಿಜಿಟಲ್ ಯುಗ ಬೇಕು. ಆದರೆ ನಮ್ಮ ಹಿರಿಯರ ನಡೆಸಿ ಕೊಂಡು ಬಂದಿರುವ ಆಚರಣೆಗಳನ್ನು, ಶುದ್ದಾಚಾರಗಳನ್ನು ಪಾಲಿಸ ಬೇಕು. ಸನಾತನ ಹಿಂದೂ ಧರ್ಮ ಎಂದೂ ನಾಶವಾಗದು. ಧರ್ಮವನ್ನು ನಾವು ರಕ್ಷಿಸಿದಾಗ ಧರ್ಮ ನಮ್ಮನ್ನು ರಕ್ಷಿಸುತ್ತದೆ.ಧರ್ಮ ರಕ್ಷಣೆ ಜೊತೆಗೆ ಪ್ರಕೃತಿಯ ರಕ್ಷಣೆ ಕೂಡ ಪ್ರತಿಯೊಬ್ಬರ ಜವಾಬ್ದಾರಿ. ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ .”ಇನ್ನೊಂದು ಧರ್ಮ ಮೇಲೆ ಆಕ್ರಮಣ ಮಾಡದ ಧರ್ಮ ಸನಾತನ ಹಿಂದೂ ಧರ್ಮ, ಇನ್ನೊಂದು ದೇಶದ ಮೇಲೆ ಆಕ್ರಮಣ ಮಾಡದ ದೇಶ ಭಾರತ. ಜಗತ್ತಿನಲ್ಲಿ ಭಾರತ ದೇಶ ದೇವರ ಕೋಣೆ ಇದ್ದಂತೆ.”. ಎಂದು ಹೇಳಿದರು.

ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಜಾಕೆ ಸಭಾಧ್ಯಕ್ಷತೆ ವಹಿಸಿದ್ದರು.

ಸಾರ್ವಜನಿಕ ಆರಾಧನಾ ಸಮಿತಿಯ ಗೌರವಾಧ್ಯಕ್ಷ ಮಾಧವ ಗೌಡ ಜಾಕೆ,ಅಧ್ಯಕ್ಷ ಸವಿತಾರ ಮುಡೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಆರಾಧನಾ ಸಮಿತಿಯ ಕಾರ್ಯದರ್ಶಿ ಜಯರಾಮ ಕಲ್ಲಾಜೆ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಕುದ್ವ ಉಪಸ್ಥಿತರಿದ್ದರು.

ಇದೇ ವೇಳೆ ಡಾ.ಆರ್. ಕೆ. ನಾಯರ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸುಧಾ ಕೋಟೆ ಪ್ರಾರ್ಥಿಸಿದರು.‌ ಸವಿತಾರ ಮುಡೂರು ಸ್ವಾಗತಿಸಿದರು ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮೇಶ್ ಪಂಜದಬೈಲು, ತೀರ್ಥಾನಂದ ಕೊಡೆಂಕಿರಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸೋಮಶೇಖರ ನೇರಳ ಕಾರ್ಯಕ್ರಮ ನಿರೂಪಿಸಿದರು.


ಕೇಶವ ಕುದ್ವ ವಂದಿಸಿದರು.

ವೈಧಿಕ ಕಾರ್ಯಕ್ರಮಗಳು, ಭಜನಾ ಸಂಕೀರ್ತನೆ, ಮಹಾ ಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಕಲಾಮಂದಿರ್ ಡ್ಯಾನ್ಸ್ ಕ್ರೂ ಪ್ರಸ್ತುತಿಯ ನೃತ್ಯ ವೈವಿಧ್ಯ, ಮತ್ತು ಕೊಡವೂರು ನೃತ್ಯ ನಿಕೇತನ ಪ್ರಸ್ತುತಿಯ ನಾರಸಿಂಹ ನೃತ್ಯ ರೂಪಕ ಪ್ರದರ್ಶನ ಗೊಂಡಿತು.

ಸೆ.9 (ಇಂದು): ವೈಭವದ ಶೋಭಾಯಾತ್ರೆ:
ಸೆ.9 ರಂದು ಬೆಳಗಿನ ಪೂಜೆ, ನಾಗತೀರ್ಥ ಪಂಚಲಿಂಗೇಶ್ವರ ಭಜನಾ ಮಂಡಳಿ , ಶ್ರೀ ವಿಷ್ಣು ಭಜನಾ ಮಂಡಳಿ ಅಳ್ಪೆ ಚಿಂಗಾಣಿಗುಡ್ಡೆ ಯವರಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ.


ಸಂ.ಗಂ. 3ರಿಂದ ವೈಭವದ ಶೋಭಾಯಾತ್ರೆಯು ದೇಗುಲದ ವಠಾರದಿಂದ ಪಂಜ ಪೇಟೆಯ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಪಂಜ ಹೊಳೆಯ ಸೇತುವೆ ಬಳಿ ಜಲಸ್ತಂಭನ ಜರುಗಲಿದೆ. ಶೋಭಾಯಾತ್ರೆಯಲ್ಲಿ ರಾಧಣ್ಣ ಪಿಲಿ ಪ್ರಸಿದ್ಧ ಹುಲಿ ವೇಷ ತಂಡದಿಂದ ತುಳುನಾಡಿನ ಹೆಮ್ಮೆಯ ಹುಲಿ ವೇಷ, ಕೀಲು ಕುದುರೆ ,ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಮೊದಲಾದ ತಂಡಗಳು ಪಾಲ್ಗೊಳ್ಳಲಿವೆ.


ಸೆ.9 ರಂದು ಬೆಳಗಿನ ಪೂಜೆ, ನಾಗತೀರ್ಥ ಪಂಚಲಿಂಗೇಶ್ವರ ಭಜನಾ ಮಂಡಳಿ , ಶ್ರೀ ವಿಷ್ಣು ಭಜನಾ ಮಂಡಳಿ ಅಳ್ಪೆ ಚಿಂಗಾಣಿಗುಡ್ಡೆ ಯವರಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ.


ಸಂ.ಗಂ. 3ರಿಂದ ವೈಭವದ ಶೋಭಾಯಾತ್ರೆಯು ದೇಗುಲದ ವಠಾರದಿಂದ ಪಂಜ ಪೇಟೆಯ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಪಂಜ ಹೊಳೆಯ ಸೇತುವೆ ಬಳಿ ಜಲಸ್ತಂಭನ ಜರುಗಲಿದೆ. ಶೋಭಾಯಾತ್ರೆಯಲ್ಲಿ “ಜಿಲ್ಲೆಯ ಪ್ರಸಿದ್ಧ ಪಿಲಿ ರಾಧಣ್ಣ ಪಿಲಿ” ಹುಲಿ ವೇಷ ತಂಡದಿಂದ ತುಳುನಾಡಿನ ಹೆಮ್ಮೆಯ ಹುಲಿ ವೇಷ, ಕೀಲು ಕುದುರೆ ,ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಮೊದಲಾದ ತಂಡಗಳು ಪಾಲ್ಗೊಳ್ಳಲಿವೆ.