ಸೆ.15 : ಸುಳ್ಯದಲ್ಲಿ ಮಾನವ ಸರಪಳಿ

0

ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ಕರ್ನಾಟಕದ ನಾಗರಿಕರಿಗೆ ಅರಿವು ಮೂಡಿಸುವ ಸಲುವಾಗಿ ೨೦೨೪-೨೫ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಸುಳ್ಯದಲ್ಲಿ ಸೆ.15ರಂದು ಮಾನವ ಸರಪಳಿಯನ್ನು ಆಯೋಜಿಸಲಿದೆ. ಕನಕಮಜಲಿನಿಂದ ಮುಖ್ಯರಸ್ತೆಯಲ್ಲಿ ಸುಳ್ಯ ಮೂಲಕ ಸಂಪಾಜೆ ತನಕ ಮಾನವ ಸರಪಳಿ ರಚನೆ ಮಾಡಲಾಗುವುದು.

ಈ ಕುರಿತ ಪೂರ್ವಭಾವಿ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಶೀಲ್ದಾರ್ ಮಂಜುನಾಥ್ ಜಿ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಮುಖವಾಗಿ ಮಾನವ ಸರಪಳಿ ಆಯೋಜಿಸುವ ಕುರಿತು ಚರ್ಚಿಸಲಾಯಿತು. ಸುಮಾರು ೩೫ ಸಾವಿವರಕ್ಕೂ ಅಧಿಕ ಜನರನ್ನು ಸೇರಿಸಿಕೊಂಡು ಏಕಕಾಲದಲ್ಲಿ ಮಾನವ ಸರಪಳಿ ರಚನಾ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನಿರ್ಧರಿಸಲಾಯಿತು.

ಈ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸರಕಾರೇತರ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಮೂಲಕ ನಡೆಸುವಂತೆ ಸೂಚಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ, ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ, ಇ ಒ ರಾಜಣ್ಣ, ಪ್ರಬಾರ ಬಿಇಒ ಶೀತಲ್ ಯು ಕೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮಾದೇವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.