ಸುಳ್ಯ ಬಿಜೆಪಿ ಮಂಡಲ ವಿಶೇಷ ಕಾರ್ಯಕಾರಿಣಿ

0

ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯು ಸೆ.9ರಂದು ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಅವರನ್ನು ಸನ್ಮಾನಿಸಲಾಯಿತು.

ಲೋಕಸಭಾ ಚುನಾವಣೆಯ ಉಸ್ತುವಾರಿ ಹರೀಶ್ ಕಂಜಿಪಿಲಿ, ವಿವಿಧ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಕೇಶ್ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಕಾರ್ಯದರ್ಶಿ ಕುಮಾ‌ರ್ ಮುಳುಗಾಡು, ಮಂಡಲ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾ‌ರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಂಡಲದಮಾಜಿ ಅಧ್ಯಕ್ಷರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು. ಆಶಾ ತಿಮ್ಮಪ್ಪ ವಂದೇ ಮಾತರಂ ಹಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾ‌ರ್ ಕಂದಡ್ಕ ಸ್ವಾಗತಿಸಿ, ಪ್ರದೀಪ್ ರೈ ಮನವಳಿಕೆ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.