ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರ ಸುಳ್ಯ ಇದರ ನೇತೃತ್ವದಲ್ಲಿ 2024 -25 ನೇ ಸಾಲಿನ ಸುಳ್ಯ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶ್ರೀ ಶಾರದಾ ಅನುದಾನಿತ ಪ್ರೌಢಶಾಲೆಯಲ್ಲಿ ಸೆ.9 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ (ರಿ) ಸುಳ್ಯದ ಅಧ್ಯಕ್ಷರು ಧನಂಜಯ ಅಡ್ಪoಗಾಯರವರು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳ ಅಭಿವ್ಯಕ್ತಿಗೆ ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆಯರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶ್ರೀತಲ್ ಯು ರವರು ಗೌರವ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಇವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಂಸ್ಥೆಯ ವತಿಯಿಂದ ಶ್ರೀಮತಿ ಶಶಿಕಲಾ ನೀರಬಿದಿರೆಯವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುಳ್ಯ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ಶ್ರೀಮತಿ ಮಮತಾ ಹಾಗೂ ಸುಬ್ರಮಣ್ಯ. ನಗರ ಪಂಚಾಯತ್ ಸದಸ್ಯರಾದ ಧೀರ ಕ್ರಾಸ್ತ ,ಶಾಲಾ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಮಹೇಶ್ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ ಇವರು ಉಪಸ್ಥಿತರಿದ್ದರು. ಅಪರಾಹ್ನದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ(ರಿ) ಸುಳ್ಯದ ನಿರ್ದೇಶಕರಾದ ಶ್ರೀಮತಿ ತಂಗಮ್ಮ ಇವರು ಅಧ್ಯಕ್ಷ ಸ್ಥಾನವನ್ನು ವಹಿಸಿ ಸಮಗ್ರ ಪ್ರಶಸ್ತಿಯನ್ನು ವಿತರಿಸಿದರು. ವೇದಿಕೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸುಂದರ್, ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.ಸಮಗ್ರ ಪ್ರಶಸ್ತಿಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ-ಪ್ರಥಮ,ದ್ವಿತೀಯ ಸಮಗ್ರ ಪ್ರಶಸ್ತಿ -ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಹಾಗೂ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ತೃತೀಯ ಸಮಗ್ರ ಪ್ರಶಸ್ತಿಯನ್ನು ಗಳಿಸಿದರು.ಕಾರ್ಯಕ್ರಮದ ನಿರೂಪಣೆ ಶಿಕ್ಷಕಿ ಅರ್ಪಣಾ ಜಿ ಕೆ ಹಾಗೂ ಶಿಕ್ಷಕಿ ಮೈತ್ರಿ ಎಂ ಬಿ ಇವರು ವಂದನಾರ್ಪಣೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ಆಡಳಿತ ವರ್ಗದವರು,ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.