ಅಡ್ತಲೆ ಶಾಲೆಯಲ್ಲಿ ಪೋಷಣ ಅಭಿಯಾನ ಮಾಸಾಚರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಅಂಗನವಾಡಿ ಕೇಂದ್ರ ಅಡ್ತಲೆ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ, ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಸ. ಹಿ. ಪ್ರಾ. ಶಾಲೆ ಅಡ್ತಲೆಯಲ್ಲಿ ಸೆಪ್ಟೆಂಬರ್ ೦9 ರಂದು ನಡೆಯಿತು.

ಅಡ್ತಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ  ಮುಕುಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಆಶಾ ಕಾಯರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯ ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶ್ರೀಮತಿ ಪ್ರಮೀಳಾ ರವರು ಪೌಷ್ಟಿಕತೆಯ ಬಗ್ಗೆ ಮಾತಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ದೀಪಿಕಾ ರವರು ಮಕ್ಕಳ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು.ಆಶಾ ಕಾರ್ಯಕರ್ತೆ ಶ್ರೀಮತಿ ಸುಮಲತಾ ಹಾಜರಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಪೋಷಕರು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಪೌಷ್ಠಿಕ ತಿನಿಸುಗಳನ್ನು ನೀಡಿ ಸಹಕರಿಸಿದರು. ಅಡ್ತಲೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನುಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು. ಅಡ್ತಲೆ ಶಾಲಾ ಶಿಕ್ಷಕಿ ಶ್ರೀಮತಿ ಪವಿತ್ರ ಸ್ವಾಗತಿಸಿ ಶಿಕ್ಷಕಿ ಕು. ತೃಪ್ತಿ ವಂದಿಸಿದರು.ಕಾರ್ಯಕ್ರಮದಲ್ಲಿ ಪೋಷಕರು ಸ್ತ್ರೀಶಕ್ತಿ ಸಂಘದ ಸದಸ್ಯರುಗಳು, ಹಾಗೆಯೇ ಅಂಗನವಾಡಿ ಸಹಾಯಕಿ

ಶ್ರೀಮತಿ ಶುಭಲಕ್ಷ್ಮಿ ಹಾಜರಿದ್ದರು.