ಪೆರಾಜೆ ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನ ಮತ್ತು ಕಛೇರಿ ಉದ್ಘಾಟನೆ

0

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಸ್ವಾವಲಂಬಿಗಳಾಗಿ ಬದುಕಲು ಸಹಕಾರಿ ಸಂಘಗಳೇ ಕಾರಣ ಸಂಸದ ಯದುವೀರ್ ಒಡೆಯರ್

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಸಭಾಭವನ ಮತ್ತು ಕಛೇರಿ ಉದ್ಘಾಟನಾ ಸಮಾರಂಭವು ಸೆ.10ರಂದು ಜರುಗಿತು.

ನೂತನ ಸಭಾಭವನವನ್ನು ಹಾಗೂ ಕಛೇರಿಯನ್ನು ಮೈಸೂರು – ಕೊಡಗು ಲೋಕಸಭಾ ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಸಾಲ – ಸೌಲಭ್ಯಗಳನ್ನು ನೀಡುತ್ತಾ ಜನರು ಸ್ವಾವಲಂಬಿಗಳಾಗಿ ಬದುಕುವಂತಾಗಲು ಸಹಕಾರಿ ಸಂಘಗಳೇ ಕಾರಣವಾಗಿದೆ. ಆ ಮೂಲಕ ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ ಎಂದು ಹೇಳಿದರು.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೊಂಡದೇರ ಗಣಪತಿ ಅವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕಟ್ಟಡ ವಿನ್ಯಾಸ ಮಾಡಿದ ಇಂಜಿನಿಯರ್ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕೊಡಗು ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೊಂಡದೇರ ಗಣಪತಿ, ಮಂಗಳೂರು ಕ್ಯಾಂಪ್ಕೋ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ ಅವರನ್ನು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿದ್ದ ಮಾಜಿ ಶಾಸಕ ಕೆ‌.ಜಿ. ಬೋಪಯ್ಯ , ಮಂಗಳೂರು ಕ್ಯಾಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ , ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ್ ಊರುಬೈಲು ಅವರು ಶುಭಹಾರೈಸಿದರು.


ವೇದಿಕೆಯಲ್ಲಿ ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಾಲಚಂದ್ರ, ಪೆರಾಜೆ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ‌.ಎಂ., ಗ್ರಾ.ಪಂ. ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಮರಗೋಡು ಸಹಕಾರಿ ಸಂಘದ ಅಧ್ಯಕ್ಷ ಅಶ್ವಿನ್ ಸತೀಶ್ ಕಾಂಗೀರ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ದೀನರಾಜ್ ದೊಡ್ಡಡ್ಕ, ಹೊನ್ನಪ್ಪ ಅಮೆಚೂರು, ಧನಂಜಯ ಕೋಡಿ, ಸೀತಾರಾಮ ಕದಿಕಡ್ಕ, ಜಯರಾಮ ನಿಡ್ಯಮಲೆ, ಶ್ರೀಮತಿ ಪ್ರಮೀಳ ಬಂಗಾರಕೋಡಿ, ಶ್ರೀಮತಿ ಪುಷ್ಪಾವತಿ ವ್ಯಾಪಾರೆ, ಪ್ರದೀಪ್ ಕೆ.ಎಂ., ಶೇಷಪ್ಪ ನಾಯ್ಕ ನಿಡ್ಯಮಲೆ, ಕಿರಣ್ ಬಂಗಾರಕೋಡಿ, ಜಯರಾಮ ಪಿ.ಟಿ. ಸೇರಿದಂತೆ ಸಹಕಾರಿ ಸಂಘದ ಸಿಬ್ಬಂದಿಗಳು ಹಾಗೂ ಪೆರಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.