ಮರ್ಕಂಜ : ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ

0

ಶಾಲಾ ಶಿಕ್ಷಣ ಇಲಾಖೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರೌಢಶಾಲೆ ಮರ್ಕಂಜ ಇದರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢ ಶಾಲೆ ಮರ್ಕಂಜದ ಪಂಚಶ್ರೀ ಕ್ರೀಡಾಂಗಣದಲ್ಲಿ ನೆರವೇರಿತು.

ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಹೊಸೋಳಿಕೆ ಅಧ್ಯಕ್ಷತೆ ವಹಿಸಿದ್ದರು . ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಮತ್ತು ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ರಾಜೇಶ್ ನಾಥ್ ಜಿ. ಧರ್ಮದರ್ಶಿಗಳು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ದ ಮಠ ಮರ್ಕಂಜ , ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಸಂಚಾಲಕರಾದ ಹರೀಶ್ ಕಂಜಿಪಿಲಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಮತಿ ಆಶಾ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದ ಅಳವು ಪಾರೆ, ಯಶವಂತ ಸೂಟೆಗದ್ದೆ, ನಿಕಟ ಪೂರ್ವ ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನಂದ ಬಾಣೂರು , ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಕಟ್ಟದ ಮೂಲೆ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ ಇಡ್ಯಡ್ಕ , ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಲಿಂಗಪ್ಪ ನಾಯ್ಕ ತೋಟಚಾವಡಿ , ಪಂಚ ಸ್ಥಾಪನೆಗಳ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವಾಧ್ಯಕ್ಷ ರಾಘವ ಗೌಡ ಕಂಜಿಪಿಲಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಎಂ. ಟಿ., ವಿದ್ಯಾರ್ಥಿ ನಾಯಕರದ ಮೋಕ್ಷಿತ್ ಪಿ.ವಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶ್ರೀಮತಿ ಆಶಾ ನಾಯಕ್ ರವರು ಪ್ರಸ್ತಾಪಿಸಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಎಂ.ಟಿ ಸ್ವಾಗತಿಸಿದರು . ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ ಎಂ.ಟಿ. ವಂದಿಸಿದರು. ಶಿಕ್ಷಕಿ ಶ್ರೀಮತಿ ಮಲ್ಲಿಕಾ.ಟಿ. ಕಾರ್ಯಕ್ರಮ ನಿರೂಪಿಸಿದರು.