ಮೈಸೂರು – ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೆ.10ರಂದು ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಕಛೇರಿಗೆ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.
ಅಲ್ಲಿ ಅವರನ್ನು ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಉಪಾಧ್ಯಕ್ಷ ರಾಜಾರಾಮ ಕಳಗಿ, ಓ.ಆರ್. ಮಾಯಿಲಪ್ಪ, ಜಗದೀಶ್ ಕೆದಂಬಾಡಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.