ಸೆ.15ರಂದು ಮಾನವ ಸರಪಳಿ ಸಿದ್ಧತೆ ಪರಿಶೀಲನೆ

0

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15 ರಂದು ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದಗ ರವರ ನೇತೃತ್ವದಲ್ಲಿ ಮಾನವ ಸರಪಳಿ ಸಾಗುವ ಪಥದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.


ಸುಳ್ಯ ತಾಲೂಕಿನ ಕನಕಮಜಲಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ತಾಲೂಕು ಅಧಿಕಾರಿಗಳಿಂದ ಮಾನವ ಸರಪಳಿ ಆಯೋಜನೆಗೆ ನಡೆಸಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು, ಮಾನವ ಸರಪಳಿ ಯಶಸ್ವಿ ಆಯೋಜನೆ ಬಗ್ಗೆ ನಿರ್ದೇಶನಗಳನ್ನು ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಯಾ ವ್ಯಾಪ್ತಿಯ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.