ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಖೋ ಖೋ ಪಂದ್ಯಾಟ

0

ಚೆಂಬು ಸ.ಹಿ.ಪ್ರಾ.ಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಡಗಿನ ಮೂರ್ನಾಡು ಜ್ಞಾನಜೋತಿ ಸ.ಹಿ.ಪ್ರಾ.ಶಾಲಾ ಮೈದಾನದಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಚೆಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ವೇದೇಶ್ ಹೈ ಜಂಪ್ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಜೊತೆಗೆ ಡಿಸ್ಕ್ ಥ್ರೋನಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಮೌಲ್ಯ ಲಾಂಗ್ ಜಂಪ್ ನಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿಜೇತ ತಂಡದ ಜೊತೆ ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷ ನವೀನ್ ರಾಮಕಜೆ , ಸದಸ್ಯ ಜೀವನ್, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಶೆಟ್ಟಿ ಹಾಗೂ ಶಾಲಾ ಶಿಕ್ಷಕಿಯರಾದ ಲೋಕೇಶ್ವರಿ ಮತ್ತು ಜಲಜಾಕ್ಷಿ ಅವರು ಉಪಸ್ಥಿತರಿದ್ದರು.