ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಐಟಿಐಯಲ್ಲಿ ‘ಆತ್ಮಹತ್ಯೆ ತಡೆಗಟ್ಟುವ’ ದಿನಾಚರಣೆ

0

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ನಿಂತಿಕಲ್ಲು, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ನಿಂತಿಕಲ್ಲಿನ ಐಟಿಐಯಲ್ಲಿ ಸೆ. 13ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಅಶೋಕ್ ಕುಮಾರ್ ಕೆ.ಎಸ್ ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು.

ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಮೀಳಾ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಿ, “ವಿದ್ಯಾರ್ಥಿಗಳು ಸಾಮಾಜಿಕ ಮತ್ತು ಕೌಟುಂಬಿಕ ಜವಾಬ್ದಾರಿಯ ಅರಿವು ಮೂಡಿದಾಗ ಮತ್ತು ಸಾಮಾಜಿಕ ಜಾಲತಾಣಗಳ ಸದ್ಬಳಕೆಯಾದಾಗ ಖಿನ್ನತೆ ಎಂಬುದನ್ನು ತೆಗೆದುಹಾಕಿ ಒಬ್ಬ ಪ್ರಜ್ಞಾವಂತ ವ್ಯಕ್ತಿಯಾಗಿ ಸಮಾಜದಲ್ಲಿ ಬಾಳಬಲ್ಲರು” ಎಂದು ತಿಳಿಸಿದರು. ಕಲ್ಮಡ್ಕ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಪವಿತ್ರ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಸನ್ನ ವೈ.ಟಿ ಕಾರ್ಯಕ್ರಮ ನಿರೂಪಿಸಿದರು.